ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4014 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಪೊಲೀಸ್ ಕಾನ್ಸ್ಟೇಬಲ್ (ನಾಗರಿಕ) ಪುರುಷ ಮತ್ತು ಮಹಿಳಾ 2565 ಹುದ್ದೆಗಳು ಹಾಗೂ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) ಪುರುಷ 1449 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

4014 ಹುದ್ದೆಗಳಲ್ಲಿ 1002 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಾಗಿರುತ್ತವೆ. ಮೇ 20 ರಿಂದ 22ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.