ಬೆಂಗಳೂರು : ಮುಂದಿನ 5 ವರ್ಷದ ಅವಧಿಯಲ್ಲಿ ರಾಜ್ಯದೆಲ್ಲೆಡೆ ಪೊಲೀಸ್ ಸಿಬ್ಬಂದಿಗೆ 10,034 ವಸತಿ ಗೃಹಗಳನ್ನು ನಿರ್ಮಿಸಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು,ಪೊಲೀಸ್ ಗೃಹ ಯೋಜನೆಗೆ 2025 ರಡಿ 5 ವರ್ಷದ ಅವಧಿಯಲ್ಲಿ ವಸತಿ ಗೃಹ ನಿರ್ಮಿಸಲು ತೀರ್ಮಾನಿಸಲಾಗಿದೆ. 9524 ಪೊಲೀಸ್ ಕಾನ್ಸ್ ಟೇಬಲ್ ಮತ್ತು 5010 ಸಬ್ ಇನ್ಸ್ ಪೆಕ್ಟರ್ ಗಳಿಗೆ 2 ಸಾವಿರ ಕೋಟಿ ರೂ. ವೆಚ್ಚದಲ್ಲಿ 10,034 ವಸತಿ ಗೃಹಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.