ಬೆಂಗಳೂರು; ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ ಹಿನ್ನೆಲೆ ರಾಜ್ಯದಲ್ಲಿ ಸೆ.6ರವರೆಗೆ 7 ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದೆ.

ಈ ವೇಳೆ, ಮಾಜಿ ರಾಷ್ಟ್ರಪತಿ ಗೌರವಾರ್ಥವಾಗಿ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರೀಯ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು ಹಾಗೂ ಯಾವುದೇ ಸರ್ಕಾರಿ ಮನರಂಜನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತಿಲ್ಲ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.