ಚಿತ್ರದುರ್ಗ: ಪ್ರತ್ಯೇಕ ಲಿಂಗಾಯಿತ ಧರ್ಮಕ್ಕೆ ಸಂಬಂಧಿಸಿದಂತೆ  ಸರಕಾರದ ತೀರ್ಮಾನ ಖುಷಿ ತಂದಿದೆ ಎಂದು ಮುರುಘಾ ಶರಣರು ಹೇಳಿದ್ದಾರೆ.

ಮುರುಘಾಮಠದಲ್ಲಿ ಕರೆಯಲಾಗಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಡಾ.ಶಿವಮೂರ್ತಿ ಮುರುಘಾ ಶರಣರು ನ್ಯಾ.ನಾಗಮೋಹನದಾಸ ವರದಿ ಜಾರಿಗೊಳಿಸುವ ನಿರ್ಧಾರ ಖುಷಿ ತಂದಿದೆ ಎಂದು ಹೇಳಿದರು.

ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಧಾರ ಸ್ವಾಗತಾರ್ಹ ಹಾಗೂ ಮುಖ್ಯಮಂತ್ರಿ ಮತ್ತು ಹೋರಾಟಗಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವೀರಶೈವರು ಲಿಂಗಾಯತರು ಶತೃಗಳಲ್ಲ, ವೇದ ಮತ್ತು ವಚನ ಸಂಸ್ಕೃತಿಯ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ ಆದರೂ ಎಲ್ಲವನ್ನು ಬಗೆಹರಿಸಿಕೊಳ್ಳ ಬಹುದಾಗಿದೆ ಎಂದರು.

ಕೇಂದ್ರ ಸರ್ಕಾರ ಯಾವ ನಿರ್ಣಯ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಿ ನಿರ್ಣಯವನ್ನು ಗಮನಿಸಿ ಮುಂದಿನ ಹೆಜ್ಜೆ ಇಡಲಿದ್ದೇವೆ ಎಂದರು.