ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಅವರ ಚೌಕಿದಾರ್ ಹೇಳಿಕೆಗೆ ಸಂಸದ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟಾಂಗ್ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ‘ಚೌಕಿದಾರ್’ ಎಂತಹವನು ಎಂದು ಜನರಿಗೆ ಗೊತ್ತಿದೆ. ಮೊದಲು ಪ್ರಧಾನಮಂತ್ರಿ ಅಲ್ಲ ಪ್ರಧಾನ ಸೇವಕ್ ಅಂತ ಹೇಳುತ್ತಿದ್ದರು. ಈಗ ಚೌಕಿದಾರ್ ಎನ್ನುತ್ತಿದ್ದಾರೆ. ಬಿಜೆಪಿ ಸರ್ಕಾರದ ಚೌಕಿದಾರ ದೇಶದಲ್ಲಿ ಆಗುವ ದೊಡ್ಡ ಹಗರಣಗಳಿಗೆ ಸಂರಕ್ಷಣೆ ನೀಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಖರ್ಗೆ ಆರೋಪ ಮಾಡಿದ್ದಾರೆ.!