ಬೆಂಗಳೂರು:ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜಕಾರಣದಿಂದ  ಜನಸಾಮಾನ್ಯರು ತೊಂದರೆಗೀಡಾಗಿದ್ದಾರೆ ಎಂದು ಶಾಸಕಿ ಸೌಮ್ಯಾ ರೆಡ್ಡಿ ತಿಳಿಸಿದರು.

ಇಂದಿನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಂದು ಒಳ್ಳೆಯ ಕೆಲಸವನ್ನು ಸಹ ಪ್ರಧಾನಿ ಮೋದಿ ಮಾಡಿಲ್ಲ,  ನೋಟ್ ಬ್ಯಾನ್ ನಿಂದ ಜನರು ಸಾಕಷ್ಟು ಸಮಸ್ಯೆ ಎದುರಿಸಿದ್ದಾರೆ. ಯಾವುದಕ್ಕೂ ಅವರು ಪಾರ್ಲಿಮೆಂಟ್ ನಲ್ಲಿ ಉತ್ತರ ಕೊಟ್ಟಿಲ್ಲ ಜನರ ಹಿತದೃಷ್ಟಿಯಿಂದಲೂ ಬಿಜೆಪಿ ಸರ್ಕಾರ ಯಾವುದೇ ಕೆಲಸ ಮಾಡಿಲ್ಲ. ಎಂದರು.