ನವದೆಹಲಿ: ಲೋಕಸಭೆಯಲ್ಲಿ ಇಂದು ಪ್ರಶ್ನೋತ್ತರ ಕಲಾಪದಲ್ಲಿ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಅಬ್ಬಾಸ್ ಮುಕ್ತರ್ ನಖ್ವಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಈ ಬಗ್ಗೆ ಕರ್ನಾಟಕ ಸರ್ಕಾರಕ್ಕೆ ಸ್ಪಷ್ಟ ಸೂಚನೆಯನ್ನು ನೀಡಿದೆ ಎಂದು ಉತ್ತರಿಸಿದ್ದಾರೆ.!