ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿನ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಇಲಾಖೆ ಸುತ್ತೋಲೆಯ ಪ್ರಕಾರ, ಎಸ್‌ಎಸ್‌ಎಲ್ ಸಿ ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿರುವವರನ್ನು ಹೊರತುಪಡಿಸಿ ಉಳಿದೆಲ್ಲ ಶಿಕ್ಷಕರು, ಸಿಬ್ಬಂದಿ, ಸಂಶೋಧಕರು, ಗುತ್ತಿಗೆ ನೌಕರರು, ಗೌರವ ಶಿಕ್ಷಕರು ಸೇರಿ ಜು. 31 ರವರೆಗೆ ಮನೆಯಲ್ಲೇ ಕೆಲಸ ನಿರ್ವಹಿಸಬೇಕೆಂದು ಸೂಚಿಸಲಾಗಿದೆ. ಈ ಅವಧಿಯನ್ನು ಕರ್ತವ್ಯ ಅವಧಿ ಎಂದು ಪರಿಗಣಿಸಲು ನಿರ್ಧರಿಸಲಾಗಿದೆ.