ಬೆಂಗಳೂರು: ಪೋನ್ ಕದ್ದಾಲಿಕೆ ಬಗ್ಗೆ ತನಿಖೆಯಾಗಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪೋನ್ ಕದ್ದಾಲಿಕೆ ಕುರಿತಂತೆ ನಡೆಯುತ್ತಿರುವ ವಿಷಯ ಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಇದರ ಬಗ್ಗೆ ಸರಿಯಾದ ತನಿಖೆಯಾಗಲಿ. ಯಾರು ತಪ್ಪಿತಸ್ಥರಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ. 

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲದವರು ಅಧಿಕಾರಕ್ಕೆ ಬಂದಾಗ ಇಂತಹ ಪ್ರಕ್ಷುಬ್ದತೆ ನಿರ್ಮಾಣವಾಗುತ್ತದೆ ಎಂದಿದ್ದಾರೆ.