ಬೆಂಗಳೂರು: 1000 ಸರಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗವನ್ನು ಹೊಸದಾಗಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಆಯ್ದ 4100 ಸರ್ಕಾರಿ ಪ್ರಾಥಮಿಕ ಶಾಲೆಗಳ ಆವರಣದಲ್ಲಿ ಅಂಗನವಾಡಿ ಕೇಂದ್ರಗಳ ಸ್ಥಳಾಂತರ, ಬಾಲ ಸ್ನೇಹಿ ಕೇಂದ್ರಗಳಾಗಿ ಬಲವರ್ಧನೆ ಮಾಡಲಾಗುತ್ತದೆ.

ಎಲ್‍ಕೆಜಿ, ಯುಕೆಜಿ ತರಗತಿಗಳ ಪ್ರಾರಂಭ ಮಾಡಲಾಗುವುದು. ಜತೆಗೆ, ಒಂದು ಕಿ.ಮೀ ವ್ಯಾಪ್ತಿಯಲ್ಲಿ ಕಡಿಮೆ ದಾಖಲಾತಿ ಹೊಂದಿರುವ 28847 ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ಹತ್ತಿರದ 8530 ಸರಕಾರಿ ಶಾಲೆಗಳೊಂದಿಗೆ ವಿಲೀನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.