ಬೆಂಗಳೂರು: ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ಮಂಡಿಸಿದ ಬಜೆಟ್ ನಲ್ಲಿ ಹಿರಿಯನಾಗರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.

ಹಿರಿಯರ ನಾಗರಿಕರ ಕಲ್ಯಾಣಕ್ಕಾಗಿ ಬದ್ಧವಾಗಿರುವ ನಮ್ಮ ಸರ್ಕಾರ ಹಿರಿಯ ನಾಗರಿಕರಿಗೆ ನೀಡುತ್ತಿರುವ 600 ರೂ.ಗಳ ಮಾಸಾಶನವನ್ನು ಒಂದು ಸಾವಿರ ರೂ.ಗೆ ಹೆಚ್ಚಿಸಿ ನ.1ರಿಂದ ಜಾರಿಗೊಳಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ

ಇದರಲ್ಲಿ 65 ವರ್ಷ ಮೀರಿದ 32.92 ಲಕ್ಷ ವೃದ್ಧರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಹೇಳಿದ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇದಕ್ಕಾಗಿ ಬಜೆಟ್‍ನಲ್ಲಿ 660 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಇಂದು ತಾವು ಮಂಡಿಸಿದ ಬಜೆಟ್ ನಲ್ಲಿ ತಿಳಿಸಿದ್ದಾರೆ.