ಬೆಂಗಳೂರು: ಬಡ ರೈತರಿಗೆ ನೆರವಾಗಲು ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲು ಸರಕಾರ ಯೋಜನೆಯೊಂದನ್ನು ಕೈಗೊಳ್ಳಲು ಮುಂದಾಗಿದೆ ಎಂದು ಪಶುಸಂಗೋಪನೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

ಹೆಬ್ಬಾಳದ ಪಶುವೈದ್ಯ ಕಾಲೇಜು ಆವರಣದಲ್ಲಿ ವಿಶ್ವ ಮೊಟ್ಟೆ ದಿನ ಪ್ರಯುಕ್ತ ರಾಜ್ಯ ಸಹಕಾರ ಕುಕ್ಕುಟ ಮಹಾಮಂಡಳ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಕೋಳಿ ಸಾಕಣೆ ಉತ್ತೇಜಿಸಲು ಬಡ ರೈತರಿಗೆ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದರು.