ಬೆಂಗಳೂರು: ಮುಂದೆ ಬರಲಿರುವ ವಿಧಾನಸಭೆ ಚುನಾವಣೆಗೆ ಇಂದಿನಿಂದ ಸಜ್ಜಾಗಿರುವಂತೆ ಜೆಡಿಎಸ್‌ ಪಕ್ಷದ ಕಾರ್ಯಕರ್ತರಿಗೆ ಮತ್ತು ಮುಖಂಡರನ್ನು ಉದ್ದೇಶಿಸಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಪತ್ರ ಬರೆದಿದ್ದಾರೆ.

ಕೊರೋನಾ ಸಂಕಷ್ಟ ಸಮಯದಲ್ಲೂ ಮುಂದಿನ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಕ್ರಿಯರಾಗುವಂತೆ ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಕೈಗೊಳ್ಳುವ ಬಡವರ ವಿರೋಧಿ, ರೈತ ವಿರೋಧಿ ತೀರ್ಮಾನಗಳ ವಿರುದ್ಧ ಹೋರಾಟ ನಡೆಸಬೇಕು ಎಂದು ಹೇಳಿದ್ದಾರೆ.