ಬಳ್ಳಾರಿ : ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿವೆ. ಆದ್ರೇ ಇದಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. ಲಾಕ್ ಡೌನ್ ಮಾಡಿದ್ರೂ ಸೋಂಕಿನ ಪ್ರಕರಣಗಳು ಕಡಿಮೆ ಆಗುತ್ತದೆ ಎಂದು ಹೇಳಲಾಗದು ಸಚಿವ ಆನಂದ್ ಸಿಂಗ್  ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಈಗಾಗಲೇ ಲಾಕ್ ಡೌನ್ ಮಾಡಲಾಗಿತ್ತು. ಈಗಾಗಲೇ ಲಾಕ್ ಡೌನ್ ನಿಂದಾಗಿ ಬಡ ಜನರು ತುಂಬಾನೇ ಕಷ್ಟ ಅನುಭವಿಸಿದ್ದಾರೆ. ಮತ್ತೆ ಲಾಕ್ ಡೌನ್ ಜಾರಿ ಮಾಡಿದ್ರೆ ಕೊರೋನಾ ನಿಯಂತ್ರಣಕ್ಕೆ ಬರುತ್ತದೆ ಎಂಬುದಾಗಿ ಹೇಳಲಾಗದು ಎಂದರು.

ಆದರೆಈಗಾಗಲೇ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮಾಡಿರುವ ಲಾಕ್ ಡೌನ್ ನಿಂದಾಗಿ ಕೊರೋನಾ ನಿಯಂತ್ರಣಕ್ಕೆ ಬರುತ್ತಾ ಎಂಬುದನ್ನು ನೋಡಿಕೊಂಡು ಲಾಕ್ ಡೌನ್ ಬಗ್ಗೆ ಯೋಚಿಸುವುದಾಗಿ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.