ಬೆಂಗಳೂರು: ಬಸವಧರ್ಮ ಹೋರಾಟಗಾರ್ತಿ, ಲಿಂಗಾಯತ ಪ್ರತ್ಯೇಕ ಧರ್ಮದ ಮುಂಚುಣಿ ಆಗಿದ್ದ ಕೂಡಲಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ(೭೪) ಇಂದು ಲಿಂಗೈಕ್ಯರಾಗಿದ್ದಾರೆ.

ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು ಬಳಲುತ್ತಿದ್ದರು. ಹೀಗಾಗಿ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಮಾರ್ಚ್ ೧೦ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾದೇ ಲಿಂಗೈಕ್ಯರಾಗಿದ್ದಾರೆ.