ಲಕ್ನೋ: ಅಯೋಧ್ಯೆಯಲ್ಲಿರುವ ಬಾಬ್ರಿ ಮಸೀದಿಯನ್ನು 1992ರ ಡಿಸೆಂಬರ್ 6 ರಂದು ಕಾರಸೇವಕರು ಕೆಡವಿದ್ದರು. ಈ ವಿಚಾರಣೆಗೆ ಸಂಬಂಧಿಸಿದಂತೆ, ಸೆಪ್ಟೆಂಬರ್ 30ಕ್ಕೆ ವಿಶೇಷ ಸಿಬಿಐ ನ್ಯಾಯಾಲಯ ಅಯೋಧ್ಯೆಯಲ್ಲಿರುವ ಬಾಬ್ರಿ ಮಸೀದಿಯ ತೀರ್ಪಿನ ದಿನ ಎಲ್‌.ಕೆ ಅಡ್ವಾಣಿ ಸೇರಿ ಎಲ್ಲಾ ಆರೋಪಿಗಳನ್ನ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಧೀಶ ಎಸ್.ಕೆ. ಯಾದವ್ ಹೇಳಿದ್ದಾರೆ.

32 ಆರೋಪಿಗಳಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ ಮತ್ತು ಬಿಜೆಪಿ ನಾಯಕರಾದ ಎಂ.ಎಂ ಜೋಶಿ, ಕಲ್ಯಾಣ್ ಸಿಂಗ್, ಉಮಾ ಭಾರತಿ ಮತ್ತು ವಿನಯ್ ಕಟಿಯಾರ್ ಪ್ರಮುಖರಾಗಿದ್ದಾರೆ.

ರಕ್ಷಣಾ ಮತ್ತು ಕಾನೂನು ಕ್ರಮಗಳ ವಾದಗಳು ಸೆಪ್ಟೆಂಬರ್ 1 ರಂದು ಮುಕ್ತಾಯಗೊಂಡಿದ್ದು, ನಂತರ ವಿಶೇಷ ನ್ಯಾಯಾಧೀಶರು ತೀರ್ಪು ಬರೆಯಲು ಪ್ರಾರಂಭಿಸಿದರು ಎಂದು ಸಿಬಿಐ ವಕೀಲ ಲಲಿತ್ ಸಿಂಗ್ ತಿಳಿಸಿದರು.