ಜೋದ್ ಪುರ, ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಆಶ್ರಮದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋದ್ ಪುರ ನ್ಯಾಯಾಲಯ ಶಿಕ್ಷೆ ನೀಡಿದೆ.

ಇಂದು ಬೆಳಗ್ಗೆಯಷ್ಟೇ ಪ್ರಕರಣ ಸಂಬಂಧ ತೀರ್ಪು ನೀಡಿದ್ದ ಜೋದ್ ಪುರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನ್ಯಾಯಾಲಯದ ನ್ಯಾಯಾಧೀಶರಾದ ಮಧುಸೂದನ್ ಶರ್ಮಾ ಅವರು ಈಗ ಶಿಕ್ಷೆ ಪ್ರಮಾಣ ಪ್ರಕಟ ಮಾಡಿದ್ದು, ಪ್ರಮುಖ ದೋಷಿ ಅಸರಾಂ ಬಾಪುಗೆ ಜೀವಾವಧಿ ಶಿಕ್ಷೆ ನೀಡಿದೆ. ಅಂತೆಯೇ ಪ್ರಕರಣದ ಇತರೆ ಇಬ್ಬರು ದೋಷಿಗಳಾದ ಶಿಲ್ಪಿ ಮತ್ತು ಶರದ್​ ಅವರಿಗೆ ತಲಾ 20 ವರ್ಷ ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶ ನೀಡಿದೆ.

ನ್ಯಾಯಾಧೀಶ ಮಧುಸೂದನ್​ ಶರ್ಮಾ ಅವರು ಅತ್ಯಾಚಾರ ಪ್ರಕರಣದ ಆರೋಪಿಗಳ ಪೈಕಿ ಅಸಾರಾಂ ಬಾಪು ಮತ್ತು ಇತರ ಇಬ್ಬರು ದೋಷಿಗಳು ಎಂದು ತೀರ್ಪು ನೀಡಿದ್ದರು. ಅಸಾರಾಂ ಬಾಪು ನನ್ನು 2013 ಸೆಪ್ಟೆಂಬರ್ 1ರಂದು ಇಂದೋರ್​ನಲ್ಲಿ ಬಂಧಿಸಲಾಗಿತ್ತು. ಆ ನಂತರ ಆತನನ್ನು ಜೋಧ್​ಪುರ ಕಾರಾಗೃಹಕ್ಕೆ ರವಾನಿಸಲಾಗಿತ್ತು.

ಆಶ್ರಮದಲ್ಲಿ ಅಸಾರಾಂ ಬಾಪು ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿ 16 ವರ್ಷದ ವಿದ್ಯಾರ್ಥಿನಿ ಸ್ವಯಂ ಘೋಷಿತ ದೇವಮಾನವನ ವಿರುದ್ಧ ಕೇಸ್ ದಾಖಲಿಸಿದ್ದಳು. ರಾಜಸ್ಥಾನ ಆಶ್ರಮದಲ್ಲಿ ವಾಸಿಸುತ್ತಿದ್ದ ಬಾಲಕಿಯನ್ನು ಸ್ವಯಂಘೋಷಿತ ದೇವಮಾನವ ನಿರಂತರವಾಗಿ ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಂಡಿದ್ದ. ಈ ಪ್ರಕರಣ ಸಂಬಂಧ ಜೋಧಪುರ ಪೊಲೀಸರು ಅಸಾರಾಂನನ್ನು 2013ರ ಆಗಸ್ಟ್ 31ರಂದು ಬಂಧಿಸಿದ್ದರು. , ಅಂದಿನಿಂದಲೂ ಅವರು ಜೈಲಿನಲ್ಲಿದ್ದಾರೆ. ಇಂದು ಕೋರ್ಟ್ ಶಿಕ್ಷೆಯನ್ನು ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.