ಹಾಸನ: ಬಾಳೆಹೊನ್ನೂರು ಶಾಖಾ ಮಠದ ಆಲೂರು ತಾಲೂಕಿನ ಕಾರ್ಜುವಳ್ಳಿಯ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ(50) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಶ್ರೀಗಳು ಕಾರವಾರ ಮೂಲದವರು. ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ 2006ನೇ ಇಸವಿಯಿಂದ ಕಾರ್ಜುವಳ್ಳಿ ಹಿರೇಮಠದ ಪೀಠಾಧ್ಯಕ್ಷರಾಗಿದ್ದರು. 15 ಎಕರೆ ಪಾಳುಭೂಮಿಯಲ್ಲಿ ಮಠವನ್ನು ಅಭಿವೃದ್ಧಿ ಮಾಡಿದ್ದರು.

ಕಾರ್ಜುವಳ್ಳಿ ಹಿರೇಮಠದ ನಿವಾಸದಲ್ಲಿ ಮಂಗಳವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬುಧವಾರ ಬೆಳಗ್ಗೆ ಕೋಣೆಯತ್ತ ತೆರಳಿದ ವ್ಯಕ್ತಿಯೊಬ್ಬ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದ್ದಾರೆ. ಈ ವೇಳೆ ಶ್ರೀಗಳ ಮೃತದೇಹದ ಪಕ್ಕದಲ್ಲಿ  ಡೆತ್​ನೋಟ್​ ಸಿಕ್ಕಿದ್ದು, ಶ್ರೀಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿಗೆ ಕಾರಣ ನಿಗೂಢವಾಗಿದೆ. ಆದರೆ, ಮೃತದೇಹದ ಪಕ್ಕವೇ ಚೀಟಿಯೊಂದು ಪತ್ತೆಯಾಗಿದ್ದು, ಅದರಲ್ಲಿ ‘ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ ಎಂದು ತಿಳಿದು ಬಂದಿದೆ.