ಹೈದರಾಬಾದ್ :  ಸಿನಿ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಕುಟುಂಬಸ್ಥರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜಮೌಳಿ, ನನಗೆ ಹಾಗೂ ಕುಟುಂಬದ ಸದಸ್ಯರಿಗೆ ಕೆಲ ದಿನಗಳಿಂದ ಸ್ವಲ್ಪಮಟ್ಟಿನ ಶೀತ, ಜ್ವರ ಕಾಣಿಸಿಕೊಂಡಿದ್ದು, ನಂತರ ಅದು ಕಡಿಮೆಯಾಯಿತು. ಆದರೂ ನಾವು ಪರೀಕ್ಷೆ ಮಾಡಿಸಿದಾಗ ಸ್ವಲ್ಪ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು ನಮಗೆ ಯಾವುದೇ ಗುಣಲಕ್ಷಣಗಳಿಲ್ಲ. ಹೀಗಾಗಿ ನಾವೆಲ್ಲರೂ ಉತ್ತಮ ಸ್ಥಿತಿಯಲ್ಲಿದ್ದೇವೆ. ಆದರೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಸೂಚನೆಗಳನ್ನು ಪಾಲಿಸುತ್ತಿದ್ದೇವೆ ಎಂದು ತಿಳಿಸಿದರು.