ಬೆಂಗಳೂರು: ಬಿಜೆಪಿ ನಾಯಕರ ಅಹೋರಾತ್ರಿ ಪ್ರತಿಭಟನೆಯನ್ನು ಗಮನಿಸಿದ್ದೇನೆ. ಸಿಎಂ ಕಚೇರಿಗೆ ಮುತ್ತಿಗೆಯ ಅವಶ್ಯಕತೆಯಿಲ್ಲ.

ಜಿಂದಾಲ್ ಹಾಗೂ ಬರ ಮತ್ತು ರೈತರ ಸಾಲಮನ್ನಾ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ದನಿದ್ದೇನೆ. ಪ್ರಧಾನಿ ಸೇರಿದಂತೆ ಕೇಂದ್ರದ ಸಚಿವರೊಂದಿಗೆ ಹಲವು ಸಮಸ್ಯೆ ಕುರಿತು ಚರ್ಚಿಸಿದ್ದೇನೆ. ನಿಮ್ಮ ಸಮಯ ತಿಳಿಸಿ ಚರ್ಚೆಗೆ ನಾನು ಸಿದ್ದ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.