ಬೆಂಗಳೂರು: ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಅವರ ನಿವಾಸ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆಯುತ್ತಿರುವುದರ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದು ಹೀಗೆ.

ಐಟಿ ದಾಳಿ ಕೇವಲ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿರುವುದು ಸ್ಪಷ್ಟವಾಗಿದೆ ಚುನಾವಣಾ ಸಂದರ್ಭದಿಂದಲೂ ಇದೇ ರೀತಿ ಮಾಡಲಾಯಿತು.  ರಾಜಕೀಯ ದುರುದ್ದೇಶದಿಂದಲೇ ಹೀಗೆ ಮಾಡಿರಬಹುದು. ಬಿಜೆಪಿ ನಾಯಕರ ಮೇಲೆ ಯಾಕೆ ಐಟಿ ದಾಳಿ ನಡೆಯುತ್ತಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಹಾಕಿದ್ದಾರೆ.!