ಚಿತ್ರದುರ್ಗ: ವಿಧಾನಸಭೆ ಚುನಾವಣೆಯಲ್ಲಿ ಹೊಳಲ್ಕೆರೆ, ಮೊಳಕಾಲ್ಮುರು ಕ್ಷೇತ್ರದಲ್ಲಿ ಬಂಡಾಯವಾಗಿ ಸ್ಪರ್ಧಿಸಿರುವ ಹನುಮಕ್ಕ ಹಾಗೂ ತಿಪ್ಪೇಸ್ವಾಮಿರವರ ಮನವೊಲಿಸಲು ಇಲ್ಲಿಯವರೆಗೂ ಪ್ರಯತ್ನಿಸಿದ್ದೇವೆ. ಆದರೂ ನಾಮಪತ್ರ ವಾಪಸ್ ಪಡೆದಿಲ್ಲ. ಹಾಗಾಗಿ ಪಕ್ಷದ ವರಿಷ್ಠರಿಗೆ ವಾಸ್ತವ ಸ್ಥಿತಿಯನ್ನು ಗಮನಕ್ಕೆ ತರುತ್ತೇವೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಅವರೊಂದಿಗೆ ಮಾತುಕತೆ ನಡೆಸುವುದಿಲ್ಲ. ಚುನಾವಣೆ ಎದುರಿಸುತ್ತೇವೆ ಎಂದು ನೇರವಾಗಿ ಬಂಡಾಯ ಅಭ್ಯರ್ಥಿಗಳಿಗೆ ಮಾತಿನ ಚಾಟಿ ಬೀಸಿದರು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್

ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿ.ಶ್ರೀರಾಮುಲು ಪರವಾಗಿ ಜನಾರ್ಧನರೆಡ್ಡಿ ಚುನಾವಣಾ ಪ್ರಚಾರಕ್ಕೆ ಬಂದಿರುವುದಕ್ಕೂ ಪಕ್ಷಕ್ಕು ಯಾವುದೇ ಸಂಬಂಧವಿಲ್ಲ. ಮಿತ್ರನಾಗಿ ಬೆಂಬಲಕ್ಕೆ ನಿಂತಿದ್ದಾರೆ ಎಂದು ಹೇಳಿದ್ದಾರೆ