ಬೆಳಗಾವಿ: ದೋಸ್ತಿ ಸರಕಾರದಲ್ಲಿ ಯಾವುದು ನೆಟ್ಟಗಿಲ್ಲ ಏಕೆಂದ್ರೆ ರಮೇಶ್ ಜಾರಕಿಹೊಳಿ ಮಾನಸಿಕವಾಗಿ ದೂರವಾಗಿದ್ದಾರೆ, ಹಾಗಾಗಿ ಬಿ.ಎಸ್. ಯಡಿಯೂರಪ್ಪ ಶೀಘ್ರದಲ್ಲೇ ಸರ್ಕಾರ ರಚನೆ ಮಾಡಲಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.!

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿಗೆ ಬಿಜೆಪಿಗೆ ಬರಬೇಕು ಎಂಬ ಆಸೆ ಇದೆ. ಅವರು ನಮಗೆ ಬೆಂಬಲ ಕೊಡುವ ಭರವಸೆಯಿದೆ. 10 ಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ ಬಂದರೆ ಸ್ವಾಗತ, ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುದು ಜನರ ಭಾವನೆ ಅದು ಬಿಜೆಪಿ ಸರಕಾರ ಅಧಿಕಾರ ಹಿಡಿಯಲು ಸಹಕಾರವಾಗುತ್ತದೆ ಎಂದು ಹೇಳಿರುವ ಡೈಲಾಗ್ ವೈರಲ್ !