ಬೆಂಗಳೂರು: ಮಧ್ಯಂತರ ಚುನಾವಣೆಯಿಂದ ರಾಜ್ಯದ ಹಿತಾಸಕ್ತಿಗೆ ಧಕ್ಕೆ ಬರುತ್ತದೆ ಎಂದು ಅಭಿಪ್ರಾಯಪಟ್ಟಿರುವ ಕೇಂದ್ರ ಸಚಿವ ಸದಾನಂದಗೌಡ, ಬಿಜೆಪಿ ಸರ್ಕಾರ ಬಂದರೆ ಎಲ್ಲದಕ್ಕೂ ಅಂತ್ಯ ಬೀಳುತ್ತದೆ ಎಂದಿದ್ದಾರೆ.

ಬಿಜೆಪಿ ಪ್ರಜಾತಂತ್ರಕ್ಕೆ ಗೌರವ ಕೊಟ್ಟು ನಡೆದುಕೊಳ್ಳುತ್ತಿದೆ. ಮೈತ್ರಿ ಸರ್ಕಾರಕ್ಕೆ ಬಹುಮತ ಇಲ್ಲ ಎಂಬುದು ಜಗಜ್ಜಾಹೀರಾಗಿದೆ. ನಾಳೆ ಸುಪ್ರೀಂಕೋರ್ಟ್ ನ್ಯಾಯದ ಪರ ತೀರ್ಪು ನೀಡಲಿದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.