ಬೆಂಗಳೂರು : ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ಇದೀಗ ಬಿಜೆಪಿ ಸಹ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ರಿಲೀಸ್ ಮಾಡಿದೆ.

ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಬಿಜೆಪಿಯ 36 ಮಮದಿ ಘಟಾನುಘಟಿ ನಾಯಕರ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ. ನರೇಂದ್ರ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್, ಬಿ.ಎಸ್.ಯಡಿಯೂರಪ್ಪ, ಬಿ.ಎಲ್.ಸಂತೋಷ್, ವಿ.ಶ್ರೀನಿವಾಸ್ ಪ್ರಸಾದ್, ಬಿ.ಶ್ರೀರಾಮುಲು, ಬಸವರಾಜ್ ಬೊಮ್ಮಾಯಿ, ಗೋವಿಂದ ಕಾರಜೋಳ, ಕೆ.ಎಸ್. ಈಶ್ವರಪ್ಪ, ಜಗ್ಗೇಶ್, ಶೃತಿ, ತಾರಾ, ಅನುರಾಧ ಸೇರಿದಂತೆ 36 ಸ್ಟಾರ್ ಪ್ರಚಾರಕರು ಭರ್ಜರಿ ಪ್ರಚಾರ ನಡೆಸಲಿದ್ದಾರೆ.