ಬೆಂಗಳೂರು : ಆರ್ಥಿಕವಾಗಿ ಸದೃಢವಾಗಿದ್ದರೂ ತಪ್ಪು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಒಟ್ಟು 94 ಸಾವಿರಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.

ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ತಡೆಯುವ ಉದ್ದೇಶದಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಿಪಿಎಲ್ ಕಾರ್ಡ್ ಪಡೆದ ಅನರ್ಹರರ ಪತ್ತೆಗೆ ಮುಂದಾಗಿತ್ತು. ಕಳೆದ 15 ತಿಂಗಳಲ್ಲಿ ರಾಜ್ಯಾದ್ಯಂತ 94,885 ಬಿಪಿಎಲ್ ಕಾರ್ಡ್ ಗಳನ್ನು ಇಲಾಖೆ ರದ್ದುಪಡಿಸಿದ್ದು, ಸರ್ಕಾರಕ್ಕೆ ಅಂದಾಜು ಪ್ರತಿ ತಿಂಗಳು ಆರು ಕೋಟಿಗೂ ಹೆಚ್ಚಿನ ಹಣ ಉಳಿತಾಯವಾಗುತ್ತಿರುವುದು ಅಂಕಿ-ಅಂಶಗಳಿಂದ ತಿಳಿದುಬಂದಿದೆ.

ಬಿಪಿಎಲ್ ಪಡಿತರ ಚೀಟಿ ಪಡೆದಿರುವ ಅನರ್ಹರು ಅವುಗಳನ್ನು ಹಿಂದಿರುಗಿಸುವಂತೆ ಸಾಕಷ್ಟು ಬಾರಿ ಕಾಲಾವಕಾಶ ನೀಡಿದ್ದರೂ ಸಹ ಸೂಕ್ತ ರೀತಿಯ ಸ್ಪಂದನೆ ಸಿಕ್ಕಿರಲಿಲ್ಲ. ಹೀಗಾಗಿ ಬಿಪಿಎಲ್ ಕಾರ್ಡ್ ಪಡೆದಿರುವ ಅನರ್ಹರ ಕುರಿತು ಮಾಹಿತಿ ನೀಡುವ ಸಾರ್ವಜನಿಕರಿಗೆ ಬಹುಮಾನ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿತ್ತು.