ಬೆಂಗಳೂರು: ಇಲಾಖೆಯ ವೆಬ್ ಸೈಟ್ ನಲ್ಲಿ ತಾಂತ್ರಿಕ ಲೋಪ ಸರಿಪಡಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಬಯೋಮೆಟ್ರಿಕ್ ನೀಡಿದವರು ಕೂಡ ಡಿಸೆಂಬರ್ ನಂತರ ಮತ್ತೆ ಬಯೋಮೆಟ್ರಿಕ್ ನೀಡುವಂತೆ ಸೂಚನೆ ನೀಡಲಾಗಿದೆಯಂತೆ

ಪಡಿತರ ವಿತರಣೆ ಮತ್ತು ಇ-ಕೆವೈಸಿ ಏಕಕಾಲಕ್ಕೆ ನಿರ್ವಹಿಸಲು ತಾಂತ್ರಿಕ ತೊಂದರೆ ಕಾಣಿಸಿಕೊಂಡಿದ್ದು, ಪಡಿತರ ವಿತರಣೆ ಇಲ್ಲದ ದಿನಗಳಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಆಹಾರ ಇಲಾಖೆಯಿಂದ ಸೂಚನೆ ನೀಡಲಾಗಿತ್ತು. ಇ -ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡಬೇಕಿಲ್ಲ. ಇನ್ನು ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದ ಅನರ್ಹ ಪಡಿತರ ಚೀಟಿದಾರರ ಪತ್ತೆಗೆ ಆಹಾರ ಇಲಾಖೆ ಕ್ರಮ ಕೈಗೊಂಡಿದ್ದು ಬಯೋಮೆಟ್ರಿಕ್ ನೀಡಿ ಅಪ್ಡೇಟ್ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.