ಬೆಂಗಳೂರು: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿ ಬಿಪಿಎಲ್ ಕಾರ್ಡ್ ದಾರರಿಗೆ ರಾಜ್ಯದ 518 ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ಪಡೆದುಕೊಳ್ಳಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಯುಷ್ಮಾನ್ ಯೋಜನೆಯನ್ನು ಕಾರ್ಡ್ ದಾರರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 1800-425-2646 ಗೆ ಸಂಪರ್ಕಿಸಿ.