ಬೆಂಗಳೂರು: ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಹೊಸ ನಿಯಮದಡಿ ಜುಲೈ 15 ಅಥವಾ ಜುಲೈ 16ರಂದು ಪಡಿತರ ವಿತರಿಸಲು ತೀರ್ಮಾನಿಸಲಾಗಿದೆ. ಎಂದು ಆಹಾರ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.

ಮೈಸೂರು ಭಾಗದಲ್ಲಿ ಕೇಂದ್ರ ಸರ್ಕಾರದ ವತಿಯಿಂದ 5ಕೆಜಿ ಹಾಗೂ ರಾಜ್ಯ ಸರ್ಕಾರದ 3 ಕೆಜಿ ಅಕ್ಕಿ ಸೇರಿಸಿ ಒಟ್ಟು 8 ಕೆಜಿ ಅಕ್ಕಿ ಹಾಗೂ 2 ಕೆಜಿ ರಾಗಿಯನ್ನು ಪ್ರತಿ ಕಾರಣ ಸದಸ್ಯರಿಗೆ ನೀಡಲಾಗುತ್ತದೆ.

ಉತ್ತರ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಒಟ್ಟು 8 ಕೆಜಿ ಅಕ್ಕಿ ಹಾಗೂ 2 ಕೆಜಿ ಜೋಳವನ್ನು ಕಾರ್ಡ್ ಹೊಂದಿರುವ ಫಲಾನುಭವಿಗೆ ವಿತರಿಸಲಾಗುವುದು. ಮುಂದಿನ ತಿಂಗಳಿಂದ ಒಟ್ಟಿಗೆ ಸೇರಿಸಿ 2 ತಿಂಗಳಿನ ಎರಡು ಕೆಜಿ ಕಡಲೆಕಾಳು ವಿತರಿಸಲಾಗುವುದು ಎಂದು ಹೇಳಿದ್ದಾರೆ.