ಬೆಂಗಳೂರು : ಸಂಕಷ್ಟದಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ವ್ಯಾಪ್ತಿಯಡಿ ಕೆಲಸ ನಿರ್ವಹಿಸುವ ಮದ್ಯಾಹ್ನದ ಬಿಸಿಯೂಟ ಯೋಜನೆಯ ಅಡುಗೆ ಸಿಬ್ಬಂದಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ.

ಬಿಸಿಯೂಟ ತಯಾರಕರಿಗೆ ರಾಜ್ಯ ಸರ್ಕಾರವು ಮೂರು ತಿಂಗಳ ಸಂಭಾವನೆ ನೀಡಲು ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 1,17,999 ಅಡುಗೆ ಸಿಬ್ಬಂದಿಗೆ ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳ ಸಂಭಾವನೆ ನೀಡಲು 93.46 ಕೋಟಿ ರೂ. ಬಿಡುಗಡೆ ಮಾಡಿದೆ.