ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ಯಾವುದೇ ಕಾರಣಕ್ಕೂ ಬಹುಮತ ಸಾಬೀತು ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಒಟ್ಟು 117 ಸಂಖ್ಯಾ ಬಲ ಹೊಂದಿದೆ. ಅದಕ್ಕೆ ವಿರುದ್ಧವಾಗಿ 104 ಸ್ಥಾನ ಹೊಂದಿರುವ ಬಿಜೆಪಿಗೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಿರುವುದು ಸಂವಿಧಾನ ವಿರೋಧಿಯಾಗಿದೆ ಎಂದರು.

ಯಾವುದೇ ಕಾರಣಕ್ಕೂ ಬಿಜೆಪಿಯವರು ಬಹುಮತ ಸಾಬೀತು ಪಡಿಸಲು ಸಾಧ್ಯವಿಲ್ಲ. ವಿಧಾನಸೌಧದಲ್ಲಿ ವಿಶ್ವಾಸ ಮತ ಯಾಚನೆ ವೇಳೆ ಅವರಿಗೆ ನಿರಾಸೆಯಾಗಲಿದೆ ಎಂದರು. ಸುಪ್ರೀಂಕೋರ್ಟ್‍ನಲ್ಲಿ ನಾವು ದಾಖಲಿಸಿರುವ ಪ್ರಕರಣ ಸೂಕ್ತವಾಗಿದೆ. ಕಾನೂನು ಪ್ರಕಾರ ವಿಚಾರಣೆ ನಡೆದು ಸೂಕ್ತ ನಿರ್ಣಯ ಹೊರ ಬರುವ ವಿಶ್ವಾಸವಿದೆ ಎಂದು ಅವರು ಹೇಳಿದರು.