ಬೆಂಗಳೂರು : ನಗರದಲ್ಲಿ ಕೊರೋನಾ‌ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕೆ.ಆರ್.ಮಾರ್ಕೆಟ್ ಹಾಗೂ  ಕಲಾಸಿಪಾಳ್ಯ ಮಾರ್ಕೆಟ್ ನಲ್ಲಿ ಸೀಲ್ ಡೌನ್ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ.

ಈ ಬಗ್ಗೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ‌ಸುರಕ್ಷತೆಯ ಆದ್ಯತೆಗೆ ಈ‌ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.