ಬೆಂಗಳೂರು: ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಕಾರ್ಖಾನೆಯ ಅಕ್ಕಪಕ್ಕದ ಮನೆಗಳಿಗೆ ಬೆಂಕಿ ಆವರಿಸಿ ಕಾರ್ಖಾನೆಯ ಸಮೀಪದಲ್ಲಿದ್ದ ಕೆಲ ವಾಹನಗಳು ಸುಟ್ಟು ಭಸ್ಮವಾದ ಘಟನೆ ನಗರದ ಹೊಸ ಗುಡ್ಡದಹಳ್ಳಿಯಲ್ಲಿ ನಡೆದಿದೆ.
ಅಕ್ಕಪಕ್ಕದ ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.