ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರೊಫೆಸರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮೈಕೋ ಲೇಔಟ್ ನಲ್ಲಿ ನಡೆದಿದೆ.

ಅಶೋಕ್ ಕುಮಾರ್ ನೇಣಿಗೆ ಶರಣಾದ ನಿವೃತ್ತ ಪ್ರೊಫೆಸರ್ ಆಗಿದ್ದು, ಮೈಕೋ ಲೇಔಟ್ ನ ಕೆಎಎಸ್ ಕಾಲೋನಿಯಲ್ಲಿ ವಾಸವಾಗಿದ್ದರು. ಇವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಭಾನುವಾರ (ನ.8) ಮೈಕೋ ಲೇಔಟ್ ಠಾಣಾ ವ್ಯಾಪ್ತಿಯ ಸಿಲ್ಕ್ ಬೋರ್ಡ್ ಮನೆಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ.