ಬೆಂಗಳೂರು: ಈ ಬಾರಿ ಮುಖ್ಯ ಮಂತ್ರಿ ಕುಮಾರಸ್ವಾಮಿಯವರ ಜನತಾ ದರ್ಶನ ಬೆಂಗಳೂರಿನಲ್ಲಿ ಅಲ್ಲ ಬೆಳಗಾವಿಯಲ್ಲಿ ನಡೆಯಲಿದೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೆಪ್ಟೆಂಬರ್ 15 ರಂದು ಬೆಳಗಾವಿಯಲ್ಲಿ ಜನತಾ ದರ್ಶನ ನಡೆಸಲಿದ್ದಾರೆ. ಮಧ್ಯಾಹ್ನ 3ರಿಂದ 5ಗಂಟೆವರೆಗೆ ಜನತಾ ದರ್ಶನ ನಡೆಯಲಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.