ಬೆಂಗಳೂರು: ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ಬೆಳೆಯುವ ಹವಾಮಾನ ಆಧಾರಿತ ತೋಟಗಾರಿಕಾ ಬೆಳೆಗಳ ವಿಮೆಗೆ ಹೆಸರು ನೋಂದಾಯಿಸಿಕೊಳ್ಳಲು ಅವಧಿಯನ್ನು ವಿಸ್ತರಿಸಿ ಎಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದೇನೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ನಾನು ಮಾಡಿಕೊಂಡ  ಮನವಿಗೆ ಮುಖ್ಯ ಮಂತ್ರಿಗಳು ಸೂಕ್ತವಾಗಿ ಸ್ಪಂದಿಸಿದ್ದು, ಅವಧಿ ವಿಸ್ತರಿಸುವ ಭರವಸೆ ನೀಡಿದ್ದಾರೆ. ತೋಟಗಾರಿಕಾ ಬೆಳೆಗಳ ವಿಮೆಗೆ ಹೆಸರು ನೋಂದಾಯಿಸಲು ಜೂ.30 ಮತ್ತು ಮಾವಿನ ಬೆಳೆಗೆ ಹೆಸರು ನೋಂದಾಯಿಸಲು ಜು.31ರವರೆಗೆ ಗಡುವು ನೀಡಲಾಗಿತ್ತು ಎಂದರು.