ಉತ್ತರ ಪ್ರದೇಶ: ಇಂದು ಮುಂಜಾನೆ ಉತ್ತರ ಪ್ರದೇಶದಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದ್ದು, ಸುಮಾರು 23 ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಡಿಸಿಎಂ ಲಾರಿಯೊಂದಕ್ಕೆ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 23 ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಔರಯ್ಯದಲ್ಲಿ ಇಂದು ಮುಂಜಾನೆ 3: 30 ರ ಸುಮಾರಿಗೆ ಘಟನೆ ನಡೆದಿದೆ.

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ವಿಧಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಕಾರ್ಮಿಕರು ವಿವಿಧ ರಾಜ್ಯಗಳಿಂದ ತಮ್ಮ ಊರಿಗೆ ಲಾರಿ ಮೂಲಕ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಈ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಗಾಯಗೊಂಡಿದ್ದಾರೆ. ಎಲ್ಲಾ ವಲಸಿಗರು – ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದವರಾಗಿದ್ದು, ಎಲ್ಲಾರೂ ರಾಜಸ್ಥಾನದಿಂದ ಬರುತ್ತಿದ್ದರು ಎನ್ನಲಾಗಿದೆ.!