ಬೆಂಗಳೂರು : ಬೆಂಗಳೂರು ನಗರ ಹಾಗೂ  ಗ್ರಾಮಾಂತರ ಜಿಲ್ಲೆಗಳಲ್ಲಿ ಮಾತ್ರ ಲಾಕ್ ಡೌನ್. ಬೇರೆ ಜಿಲ್ಲೆಗಳಿಗೆ ಲಾಕ್ ಡೌನ್ ಪ್ರಶ್ನೆಯೆ ಇಲ್ಲ ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಟ್ವಿಟ್ ಮಾಡಿದ್ದಾರೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಒಂದು ವಾರ ಸಂಪೂರ್ಣವಾಗಿ ಲಾಕ್ ಡೌನ್ ಮಾಡಲಾಗಿದೆ. ಇತರೆ ಜಿಲ್ಲೆಗಳಲ್ಲೂ ಲಾಕ್ ಡೌನ್ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ.

ಜನರು ಯಾವುದೇ, ವದಂತಿಗಳಿಗೆ ಕಿವಿಗೊಡಬಾರದು. ಆತಂಕಕ್ಕೂ ಒಳಗಾಗಬಾರದು. ಈ ಮೂಲಕ ರಾಜ್ಯ ಇತರೆ ಜಿಲ್ಲೆಗಳಲ್ಲಿಯೂ ಸಂಪೂರ್ಣ ಲಾಕ್ ಡೌನ್ ವದಂತಿಗೆ ತೆರೆ ಎಳೆದಿದ್ದಾರೆ.

ಈ ಕುರಿತಂತೆ ಸಚಿವರು, ಅಧಿಕಾರಿಗಳ ಜೊತೆಗಿನ ಟಾಸ್ಕ್ ಪೋರ್ಸ್ ಸಭೆಯ ಬಳಿಕ ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ವಿಧಿಸಲಾಗಿರುವ 1 ವಾರದ ಲಾಕ್ ಡೌನ್ ಅನ್ನು ವಿಸ್ತರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಟ್ವಿಟ್ ಮಾಡಿದ್ದಾರೆ.