ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಧನಗೆರೆ-ಸತ್ತೇಗಾಲ ಮುಖ್ಯರಸ್ತೆಯಲ್ಲಿ ಬೊಲೆರೋ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪದ ಪಳನಿಮೇಡು ಗ್ರಾಮದ ಡೇವಿಡ್, ಶೇಷುರಾಜು ಹಾಗೂ ಶೆಟು ಸಾವನ್ನಪ್ಪಿರು ದುರ್ದೈವಿಗಳು. ಸತ್ತೇಗಾಲ ಮುಖ್ಯರಸ್ತೆಯಲ್ಲಿ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಬೈಕ್ ನಲ್ಲಿ ಮೂವರು ತೆರಳುತ್ತಿದ್ದರು. ಬೈಕ್ ಗೆ ಕೊಳ್ಳೆಗಾಲದಿಂದ ಸತ್ತೇಗಾಲದ ಕಡೆಗೆ ಹೋಗುತ್ತಿದ್ದ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಕೊಳ್ಳೆಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.