ನವದೆಹಲಿ: ಹೌದು ಕರ್ನಾಟಕ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ಬ್ಯಾಂಕ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಹಕರ ಜೊತೆ ಸ್ಥಳೀಯ ಭಾಷೆಯಲ್ಲಿ ವ್ಯವಹಾರ ನಡೆಸುವಂತೆ ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶವೊಂದು ಹೊರ ಬಂದಿದೆ.

ಗ್ರಾಹಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಬ್ಯಾಂಕಿಂಗ್‌ ಸೇವೆ ಒದಗಿಸಲು ಸ್ಥಳೀಯ ಭಾಷೆ ಗೊತ್ತಿರುವ ಅಧಿಕಾರಿಗಳ ನಿಯೋಜನೆಗಾಗಿ ಐಎಎಸ್‌ ಮತ್ತು ಐಪಿಎಸ್‌ ರೀತಿಯಲ್ಲಿ ‘ಅಧಿಕಾರಿಗಳ ಕೇಡರ್‌’ ರಚಿಸುವಂತೆ ಬ್ಯಾಂಕ್‌ಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸೂಚಿಸಿದ್ದಾರೆ.

ಗ್ರಾಹಕರೇ ಹಿಂದಿ ಕಲಿಯಬೇಕು ಎಂದು ಅಧಿಕಾರಿಗಳು ಆಶಿಸುವುದು ಸರಿಯಲ್ಲ. ಇದಕ್ಕೆ ಬದಲಾಗಿ ಬ್ಯಾಂಕ್‌ ಅಧಿಕಾರಿಗಳು ಸ್ಥಳೀಯರ ಜೊತೆ ವ್ಯವಹಾರಕ್ಕಾಗಿ ಅಲ್ಲಿನ ಭಾಷೆಯನ್ನ ಕಲಿಯಲೇಬೇಕು ಎಂದು ಪ್ರತಿಪಾದಿಸಿದ್ದಾರೆ.