ನವದೆಹಲಿ : ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡದಲ್ಲಿ ಬರೆಯಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ಕನ್ನಡಿಗರ ತೀವ್ರ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ  ಕನ್ನಡಿಗರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಪ್ರಾದೇಶಿಕ ಭಾಷೆಯಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡುವುದಾಗಿ ಹೇಳಿದ್ದು, ಇಂಗ್ಲಿಷ್ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳು ನಡೆಯಲಿವೆ ಎಂದು ಟ್ವೀಟ್ ಮಾಡಿದ್ದಾರೆ.