ಹಾಸನ : ಬ್ರದರ್ ಐಟಿ ಅಧಿಕಾರಿಗಳು ನಮ್ಮ ಮನೆಯ ಮೇಲೆ ದಾಳಿ ಮಾಡಲಿ, ನಮ್ಮ ಮನೆಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಸಾವಿರಾರು ಕೋಟಿ ರೂ. ಮೌಲ್ಯದ ಅಸ್ತಿ ಪತ್ರ ಇಟ್ಟುಕೊಂಡಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಮ್ಮ ಮನೆ ಮೇಲೆ ಐಟಿ ದಾಳಿ ನಡೆಯಲಿ, ಐಟಿ ಅಧಿಕಾರಿಗಳು ಬರಲಿ ಎಂದು ಕಾಯುತ್ತಿದ್ದೇನೆ. ಮನೆಯಲ್ಲಿ ಯಡಿಯೂರಪ್ಪ ಅವರ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪತ್ರ ಇಟ್ಟುಕೊಂಡಿದ್ದೆನೆ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ನಾನು ಐಟಿ ದಾಳಿಯನ್ನು ವಿರೋಧಿಸುತ್ತಿಲ್ಲ. ಆದರೆ ಸರ್ಕಾರದ ವಿರೋಧಿಗಳನ್ನು ದಮನ ಮಾಡಲು ಅದನ್ನು ಬಳಸಲಾಗುತ್ತಿದೆ. ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ತುರ್ತು ಪರಿಸ್ಥಿತಿಯಂತಹ ಅಘೋಷಿತ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.