ಬೆಂಗಳೂರು: ಇದೀಗ ನಾಲ್ಕನೇ ಹಂತದ ಲಾಕ್‌ ಡೌನ್‌ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆ ನೀಡಿರುವುದರಿಂದ ಇಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹತ್ತನೇ ಹಾಗೂ ಪಿಯುಸಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದ್ದಾರೆ.

ಎಸ್.‌ಎಸ್.‌ಎಲ್.‌ಸಿ. ಪರೀಕ್ಷೆಯನ್ನು ಜೂನ್‌ 25 ರಿಂದ ಜುಲೈ 4 ರವರೆಗೆ ನಡೆಸಲಾಗುತ್ತದೆ. ಮುಂದಿನ ದಿನಗಳಲ್ಲಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಪಿಯುಸಿ ಇಂಗ್ಲೀಷ್‌ ವಿಷಯದ ಪರೀಕ್ಷೆಯನ್ನು ಜೂನ್‌ 18 ರಂದು ನಡೆಸಲಾಗುತ್ತದೆ ಎಂದರು.