ಬೆಂಗಳೂರು; ಕನ್ನಡದ ಖ್ಯಾತ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ಭಾನುವಾರ ಮೃತಪಟ್ಟಿದ್ದಾರೆ.

ಕನ್ನಡದ 20ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಚಿರಂಜೀವಿ ಸರ್ಜಾ ಅವರಿಗೆ ಇಂದು ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.

ಅವರನ್ನು ಕೂಡಲೇ ಕುಟುಂಬಸ್ಥರು ಸಾಗರ್ ಅಪಲೋ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದರೂ ಫಲಕಾರಿಯಾಗಿಲ್ಲ.