ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ತಮ್ಮ ಡಿಕೆ ಸುರೇಶ್ ಅವರಿಗೆ ಸಿಬಿಐ ಅಧಿಕಾರಿಗಳು ಮನೆಯ ಮೇಲೆ ರೇಡ್ ಮಾಡಿದ್ದಾರೆ.

ಇಂದು ಬೆಳಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದು, ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಡಿಕೆಶಿಗೆ ಸೇರಿದ ಹಲವು ಕಡೆಗಳಲ್ಲಿ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಅವರ ಮನೆಯಲ್ಲೂ ಶೋಧಕಾರ್ಯ ನಡೆಸುತ್ತಿದ್ದಾರೆ.!