ಬೆಂಗಳೂರು:  ನಾಳೆ ನಡೆಯಬೇಕಿದ್ದ ರಾಜರಾಜೇಶ್ವರಿ ವಿಧಾನಸಭಾ ಚುನಾವಣೆಯನ್ನು ಮುಂದೂಡಲಾಗಿದ್ದು ಇದೇ ತಿಂಗಳ 28 ರಂದು ಮತದಾನ ನಡೆಯಲಿದ್ದು, 31 ರಂದು ಫಲಿತಾಂಶ ಹೊರಬರಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಾರಿ ಸಂಜೀವ್ ಕುಮಾರ್ ಹೇಳಿದ್ದಾರೆ

ಮುಂದೂಡುವುದಕ್ಕೆ ಕಾರಣ ಇತ್ತೀಚೆಗೆ ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಸಾವಿರಾರು ಮತದಾರರ ನಕಲಿ ಗುರುತಿನ ಚೀಟಿ ವಶಪಡಿಸಿಕೊಂಡಿದ್ದರು. ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ  ಎಂದು ಹೇಳಿದ್ದಾರೆ.