ಬೆಂಗಳೂರು : ಜುಲೈ 5 ರಿಂದ ರಾಜ್ಯವ್ಯಾಪಿ ಭಾನುವಾರ ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದ ಹಿನ್ನೆಲೆ ಪ್ರತಿ ಸಂಡೇ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಹೌದು, ರಾಜ್ಯ ಸರ್ಕಾರದಿಂದ ಪ್ರತಿ ಭಾನುವಾರ ಕರ್ಪ್ಯೂ ಜಾರಿಗೊಳಿಸಲಾಗಿದ್ದು, ಅಂದು ಮದ್ಯ ಮಾರಾಟಕ್ಕೆ ಯಾವುದೇ ರೀತಿಯಲ್ಲಿ ಅವಕಾಶ ಇರುವುದಿಲ್ಲ. ಈ ಮೂಲಕ ವೀಕೆಂಟ್ ನಲ್ಲಿ ಎಣ್ಣೆ ಪಾರ್ಟಿ ಮಾಡೋ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.