ನವದೆಹಲಿ: ಕೇಂದ್ರ ಸರ್ಕಾರ ದೇಶದ ಹಲವು ಮಾರ್ಗಗಳ ರೈಲು ಸಂಚಾರವನ್ನು ಖಾಸಗೀಕರಣಗೊಳಿಸಲು ಮುಂದಾಗಿರುವ ಕಾರಣ ವಿರೋಧ ವ್ಯಕ್ತವಾಗುತ್ತಿದ್ದು, ನಿರ್ಧಾರ ಹಿಂಪಡೆಯದಿದ್ದರೆ ದೇಶದಾದ್ಯಂತ ರೈಲು ಸಂಚಾರ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿವರೆಗೆ ಮುಷ್ಕರ ನಡೆಸುವುದಾಗಿ ರೈಲ್ವೆ ಇಲಾಖೆ ನೌಕರರು ಎಚ್ಚರಿಸಿದ್ದಾರೆ.

ಈ ಕುರಿತು ಚೆನ್ನೈನಲ್ಲಿ ನಡೆಯುವ ಸಮಾವೇಶದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಆಲ್ ಇಂಡಿಯಾ ರೈಲ್ವೆ ಮೆನ್ಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಶಿವ ಗೋಪಾಲ ಮಿಶ್ರಾ ತಿಳಿಸಿದ್ದಾರೆ.