ಚಿತ್ರದುರ್ಗ : ತಮ್ಮನ್ನು ಭಾವಿ ಮುಖ್ಯಮಂತ್ರಿ ಎಂದು ಕರೆಯಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ತರಳಬಾಳು ಶಾಖಾ ಮಠದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ನಾಟಕೊತ್ಸವದಲ್ಲಿ ಭಾಗವಹಿಸಿದ್ದ ಹೊಸದುರ್ಗ ಶಾಸಕ ಗೂಳಿ ಹಟ್ಟಿ ಶೇಕರ್ ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಹೇಳಲು ಮುಂದಾದಗ ಯಡಿಯೂರಪ್ಪ ತಡೆದಿದ್ದಾರೆ.

ಬಳಿಕ ಮಾತನಾಡಿದ ಬಿಎಸ್ ವೈ, ಪದೇ ಪದೇ ಮುಂದಿನ ಮುಖ್ಯಮಂತ್ರಿ ಅಂತಾ ಕರೆಯಬೇಡಿ. ಕಾಲ ಬಂದಾಗ ಅದೆಲ್ಲವೂ ತಾನಗೇ ಆಗುತ್ತದೆ ಎಂದು ಹೇಳಿದರು.