ಬೆಂಗಳೂರು : ಭ್ರಷ್ಟಾಚಾರದ ಹುತ್ತಕ್ಕೆ ಕೈ ಇಟ್ಟರೆ ನನ್ನ ಕುರ್ಚಿ ಉಳಿಯಲ್ಲ ಎಂಬುದು ನನಗೆ ಗೊತ್ತು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ  ಹೇಳಿದ್ದು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ವತಿಯಿಂದ ಸೋಮವಾರ ನಡೆದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿದ ಸಮಾರಂಭದಲ್ಲಿ.

ಏಕೆಂದ್ರೆ   ಶೃಂಗೇರಿ ಜಗದ್ಗುರುಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಭ್ರಷ್ಟಾಚಾರ ನಿಲ್ಲಿಸಿ ಎಂದಿದ್ದರು ಅದಕ್ಕೆ ಭ್ರಷ್ಟಾಚಾರದ ವಿರುದ್ಧ ಹೋರಾಡಲು ತುಸು ಸಮಯಬೇಕಾಗುತ್ತದೆ. ಸರ್ಕಾರಿ ಇಲಾಖೆ ಅಧಿಕಾರಿಗಳ ಧನದಾಹ ಸರಿಮಾಡುವುದಕ್ಕೆ ಕೈಹಾಕಲು ನನಗೆ ಭಯವಾಗುತ್ತದೆ. ಯಾವ ಇಲಾಖೆಯಲ್ಲಿ ಹೇಗೆ ಲೂಟಿ ನಡೆಯುತ್ತಿದೆ ಎಂದು ಕಳೆದ ಒಂದು ತಿಂಗಳ ಆಡಳಿತದಲ್ಲಿ ಗಮನಿಸುತ್ತಿದ್ದೇನೆ. ವಿಧಾನಸೌಧದಲ್ಲಿ ಭ್ರಷ್ಟಾಚಾರ ನಡೆಯುತ್ತದೆ. ಒಂದು ವರ್ಗಾವಣೆ ಮಾಡಲು 5ರಿಂದ 10 ಲಕ್ಷ ರು. ಪಡೆಯಲಾಗುತ್ತದೆ ಎಂದೂ ಅವರು ಹೇಳುವ ಮೂಲಕ ಸರ್ಕಾರದಲ್ಲಿ ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದು ಗೊತ್ತಿದೆ ಎಂದರು.

ಸಂಪೂರ್ಣವಾಗಿ ನಿಲ್ಲಿಸಲು ಕಷ್ಟಎಂದು ಹೇಳಿದ್ದೆ. ಸರ್ಕಾರಿ ಇಲಾಖೆ ಅಧಿಕಾರಿಗಳ ಧನದಾಹ ಸರಿಮಾಡುವುದಕ್ಕೆ ಕೈಹಾಕಲು ನನಗೆ ಭಯವಾಗುತ್ತದೆ. ಯಾವ ಇಲಾಖೆಯಲ್ಲಿ ಹೇಗೆ ಲೂಟಿ ನಡೆಯುತ್ತಿದೆ ಎಂದು ಕಳೆದೊಂದು ತಿಂಗಳ ಆಡಳಿತದಲ್ಲಿ ಗಮನಿಸುತ್ತಿದ್ದೇನೆ ಎಂದರು.